Home Mangalorean News Kannada News ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ...

ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Spread the love

ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಬೆಂಗಳೂರು: ಡಾರ್ಕ್ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ.

 

ಬಂಧಿತರನ್ನು ‘ಕೇರಳದ ಕೆ. ಪ್ರಮೋದ್, ಫಾಹಿಮ್, ಕರ್ನಾಟಕದ ಎ, ಹಶೀರ್ ಹಾಗೂ ಎಸ್.ಎಸ್. ಶೆಟ್ಟಿ ಎಂದು ಗುರುತಿಸಲಾಗಿದೆ.

ಬಂಧಿತರು ಸಾಗಿಸುತ್ತಿದ್ದ 750 ಎಂ ಡಿ ಎಮ್ ಮಾತ್ರೆಗಳನ್ನು ಬಂಧನ ವೇಳೆ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ಲಭಿಸಿದೆ

‘ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್ಸಿಬಿ) ಅಧಿಕಾರಿಗಳುಜುಲೈನಲ್ಲಿ ಕಾರ್ಯಾಚರಣೆ ನಡೆಸಿ ಅಂಚೆ ಕಚೇರಿಗಳಲ್ಲಿ ಪಾರ್ಸೆಲ್ ಹೋಗುತ್ತಿದ್ದರೂ ಜಪ್ತಿ ಮಾಡಿದ್ದರು. ಡ್ರಗ್ಸ್ ಯಾರು ತೋರಿಸಿದ್ದಾರೆ ಎಂಬುದು ಆರಂಭದಲ್ಲಿ ಗೊತ್ತಿರಲಿಲ್ಲ. ಅದರ ಹೆಚ್ಚಿನ ತನಿಖೆ ಕೈಗೊಂಡಾಗಲೇ ಈ ನಾಲ್ವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

‘ಎರಡು ವರ್ಷಗಳಿಂದ ಈ ಗ್ಯಾಂಗ್ ಡ್ರಗ್ಸ್ ಮಾರಾಟ ಮಾಡುತ್ತಿತ್ತು. ಉಡುಪಿಯ ಮಣಿಪಾಲದ ಕಾಲೇಜು, ಮಣಿಪಾಲ್ ಕ್ಲಬ್ಗಳು, ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಆರೋಪಿಗಳು ತಪೊಪ್ಪಿಕೊಂಡಿದ್ದಾರೆ’ ಎಂದೂ ಅಧಿಕಾರಿ ವಿವರಿಸಿದರು.


Spread the love

Exit mobile version