ಡಾ. ಜಯಪ್ರಕಾಶ್ ಶೆಟ್ಟಿ ಎಚ್. ಇವರ ಬೆಳಗಿನೊಳಗಣ ಬೆರಗು ಕೃತಿ ಬಿಡುಗಡೆ
ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ,ಇಲ್ಲಿಯ ವಾರ್ಷಿಕೋತ್ಸವ ಸಮಾರಂಭ ಇತ್ತಿಚೇಗೆ ಜರುಗಿತು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಇವರು ಡಾ. ಜಯಪ್ರಕಾಶ್ ಶೆಟ್ಟಿ ಎಚ್. ಇವರ ಕೃತಿ “ಬೆಳಗಿನೊಳಗಣ ಬೆರಗು”ಅನ್ನು ಬಿಡುಗಡೆಗೊಳಿಸಿದರು.
ಕಾಲೇಜು ಅಭಿವೃದ್ಧಿ ಮಂಡಳಿಯ ಪ್ರಖ್ಯಾತ್ ಶೆಟ್ಟಿ, ಜನಾರ್ದನ ತೋನ್ಸೆ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.