ಡಿಕೆಶಿ ಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು
ಉಡುಪಿ : ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ನ್ಯಾಯಾಲಯ ಬುಧವಾರ ಜಾಮೀನು ನೀಡಿದ ಹಿನ್ನಲೆಯಲ್ಲಿ ಉಡುಪಿಯ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ತ್ರೀವೇಣಿ ಸರ್ಕಲ್ ಬಳಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಬಾವುಟ ಹಿಡಿದು ಡಿ ಕೆ ಶಿವಕುಮಾರ್ ಪರ ಜೈಕಾರ ಹಾಕಿದರು ಮತ್ತು ಬಿಜೆಪಿಯ ದ್ವೇಷ ರಾಜಕೀಯ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಡಿಕೆಶಿ ಜಾಮೀನು ಸಿಕ್ಕಿದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.
ಪ್ರತಿಭಟನೆಯಲ್ಲಿ ನಗರ ಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಕಿಶನ್ ಹೆಗ್ಡೆ,ಹರೀಶ್ ಕಿಣಿ, ನರಸಿಂಹ ಮೂರ್ತಿ ಯತೀಶ್ ಕರ್ಕೇರ, ಗಣೇಶ್ ನೆರ್ಗಿ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.