ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮತ್ತೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ

Spread the love

ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮತ್ತೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪದಗ್ರಹಣ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ಪದಗ್ರಹಣ ಕಾರ್ಯಕ್ರಮಕ್ಕೆ ಮತ್ತೆ ಬ್ರೇಕ್ ಬಿದ್ದಿದ್ದು, ಯಾವುದೇ ಕಾರಣಕ್ಕೂ ಪದಗ್ರಹಣ ಮಾಡಬಾರದು ಎಂದು ರಾಜ್ಯ ಸರ್ಕಾರ ಪತ್ರ ಬರೆಯುವ ಮೂಲಕ ಅನುಮತಿ ನಿರಾಕರಿಸಿದೆ. ಈ ಬಗ್ಗೆ ಸರ್ಕಾರವೇ ಅಧಿಕೃತವಾಗಿ ಡಿಕೆ ಶಿವಕುಮಾರ್​​ಗೆ ಪತ್ರದ ಮುಖೇನ ಸ್ಪಷ್ಟನೆ ನೀಡಿದೆ ಎಂದು ತಿಳಿದುಬಂದಿದೆ.

ಇದೇ ಜೂನ್​​ 14ನೇರಂದು ಪದಗ್ರಹಣಕ್ಕೆ ಮುಂದಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೀಗ, ರಾಜ್ಯ ಸರ್ಕಾರ ಯಾವುದೇ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಮತ್ತು ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಮದುವೆ, ಶವಸಂಸ್ಕಾರಕ್ಕೆ ಮಾತ್ರ ಅವಕಾಶ ನೀಡಿದೆ. ಆದರೆ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಪತ್ರದಲ್ಲಿ ಉಲ್ಲೇಖಿಸಿದೆ.

ಲಾಕ್​ಡೌನ್​ನಿಂದಲೇ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗುತ್ತಿದೆ. ಈ ಸಂಬಂಧ ಅನುಮತಿ ಕೋರಿ ಡಿಕೆಶಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಪತ್ರವೂ ಬರೆದಿದ್ದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಅವಕಾಶ ನೀಡುವ ನಿರೀಕ್ಷೆಯೂ ಇತ್ತು. ಆದರೀಗ ನಾಲ್ಕನೇ ಬಾರಿಗೆ ಸರ್ಕಾರ ಅನುಮತಿ ನಿರಾಕರಿಸಿದೆ.


Spread the love