ಡಿ. 13: ಲೋಕಾಯುಕ್ತ ಜನ ಸಂಪರ್ಕ ಸಭೆ

Spread the love

ಡಿ. 13: ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ: 13-12-2023 ರಂದು ಬೆಳಿಗ್ಗೆ 11-00 ಗಂಟೆಯಿಂದ ಕಡಬ ತಾಲೂಕು, ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು

ಪೊಲೀಸ್ ಅಧೀಕ್ಷಕರ ಕಛೇರಿ: 0824-2950997, 9364062517
ಪೊಲೀಸ್ ಉಪಾಧೀಕ್ಷಕರು-1 ಕಛೇರಿ: 0824-2453420, 9364062579
ಪೊಲೀಸ್ ಉಪಾಧೀಕ್ಷಕರು-2 ಕಛೇರಿ: 0824-2453420, 9364062580
ಪೊಲೀಸ್ ನಿರೀಕ್ಷಕರು-1 ಕಛೇರಿ: 0824-2427237, 9364062691
ಪೊಲೀಸ್ ನಿರೀಕ್ಷಕರು-2 ಕಛೇರಿ: 0824-2427237, 9364062692


Spread the love