ಡಿ.18 ರಂದು ಮಂಗಳೂರಿಗೆ ಪ್ರಧಾನಿ ಮೋದಿ; ಎಸ್ ಪಿ ಜಿ ಅಧಿಕಾರಿಗಳಿಂದ ಭದ್ರತಾ ಪರಿಶೀಲನೆ
ಮಂಗಳೂರು: ಲಕ್ಷ ದ್ವೀಪ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿ.18ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ಮಂಗಳೂರಿನ ಪ್ರವಾಸಿಮಂದಿರಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಅಪ್ಪಳಿಸಿದ ಓಕಿ ಚಂಡಮಾರುತದಿಂದ ಹಾನಿಗೆ ಒಳಗಾದ ಕೇರಳ,ತಮಿಳುನಾಡು ಹಾಗೂ ಲಕ್ಷ ದ್ವೀಪ ಪ್ರದೇಶವನ್ನು ಪ್ರಧಾನಿ ಅವಲೋಕಿಸಲಿದ್ದಾರೆ. ಸೋಮವಾರ ರಾತ್ರಿ ಮಂಗಳೂರಿನಲ್ಲಿ ತಂಗಲಿರುವ ಅವರು, ಡಿ.19ರಂದು ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಲಕ್ಷ ದ್ವೀಪದ ಅಗತಿ ದ್ವೀಪಕ್ಕೆ ತೆರಳಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ನಗರದ ಸರ್ಕೀಟ್ ಹೌಸ್ನಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಎಸ್ಪಿಜಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಕಮಿಷನರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಇತರ ಭದ್ರತಾ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಕೇವಲ ವಾಸ್ತವ್ಯಕ್ಕಾಗಿ ಮಾತ್ರ ಭೇಟಿ ನೀಡುತ್ತಿದ್ದಾರೆ. ಉಳಿದಂತೆ ಈ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮ ಇಲ್ಲ ಎನ್ನಲಾಗಿದೆ