Home Mangalorean News Kannada News ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ

ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ

Spread the love

ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ

ಉಡುಪಿ :ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಸಂಸ್ಕøತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಡಿಸೆಂಬರ್ 23, 25, 26 ಮತ್ತು 27 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

23 ರಂದು ಬೆಳಗ್ಗೆ 10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ರಜತಾದ್ರಿ, ಮಣಿಪಾಲದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆ ಮತ್ತು ರೈತ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.

25 ರಂದು ಬೆಳಗ್ಗೆ 10 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಚೈಲ್ಡ್ ಪ್ರೋಟೋಕಾಲ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆ, 12.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾರ್ಕೂರು ಅಳುಪೋತ್ಸವ ಮತ್ತು ಜಾನಪದ ಜಾತ್ರೆ ಸಭೆಯಲ್ಲಿ ಭಾಗವಹಿಸುವರು.

27 ರಂದು ಮಧ್ಯಾಹ್ನ 12 ಕ್ಕೆ ಉಡುಪಿ ಕೃಷ್ಣ ಮಠದಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.


Spread the love

Exit mobile version