ಡಿ.28 ಕ್ಕೆ ಬಸ್ರೂರಿನಲ್ಲಿ ಸೇವಾದಳ ಭಾವೈಕ್ಯತಾ ಮಕ್ಕಳ ಮೇಳ
ಕುಂದಾಪುರ: ಭಾರತ್ ಸೇವಾದಳ ಸಂಸ್ಥೆಗೆ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಡಿ.28 ರ ಗುರುವಾರ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ 20023-24 ನಡೆಯಲಿದೆ ಎಂದು ಭಾರತ ಸೇವಾದಳ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ ಹಾಗೂ ಕುಂದಾಪುರ ತಾಲ್ಲೂಕು ಅಧ್ಯಕ್ಷ ಗಣೇಶ್ ಶೆಟ್ಟಿ ಮೊಳಹಳ್ಳಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಭಾರತ್ ಸೇವಾದಳದ ಮಾರ್ಗದರ್ಶನದಲ್ಲಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಲಯ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ನಡೆಯುವ ಭಾರತ್ ಸೇವಾದಳ ಸಂಸ್ಥಾಪನಾ ಶತಮಾನೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನು ಬೆಳಿಗ್ಗೆ 10 ಕ್ಕೆ ಹಿರಿಯ ಧಾರ್ಮಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಉದ್ಘಾಟಿಸಲಿದ್ದಾರೆ. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಭಾರತ್ ಸೇವಾದಳದ ಜಿಲ್ಲಾ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ರಾಜೇಶ್ ಕೆ.ಸಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಕೆ.ವಿಕಾಸ್ ಹೆಗ್ಡೆ, ಗೋಪಾಲ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಶೋಭಾ ಶೆಟ್ಟಿ, ದೇವಾನಂದ ಶೆಟ್ಟಿ, ರಾಮ್ ಕಿಶನ್ ಹೆಗ್ಡೆ, ಪವನ್ ನಾಯಕ್, ಡಾ.ರಾಧಾಕೃಷ್ಣ ಶೆಟ್ಟಿ, ಮಹಾಬಲ ಕುಂದರ್, ಗಣೇಶ್ ಕುಮಾರ್ ಶೆಟ್ಟಿ ಮೊಳಹಳ್ಳಿ, ಎಸ್.ವಿಠ್ಠಲ್ ಶೆಟ್ಟಿ ಸೀತಾನದಿ, ಅಂಪಾರು ದಿನಕರ ಶೆಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭಾವೈಕ್ಯತಾ ಮೇಳದ ಅಂಗವಾಗಿ ಬೆಳಿಗ್ಗೆ ಪುರ ಮೆರವಣಿಗೆ, ಮಧ್ಯಾಹ್ನ ಪಥ ಸಂಚಲನ, ಗೌರವ ರಕ್ಷೆ, ಆಕರ್ಷಕ ಕವಾಯತು ಹಾಗೂ ವೈವಿಧ್ಯಮಯ ಭಾವೈಕ್ಯತೆಯ ಪ್ರೇರಕ ಪ್ರದರ್ಶನಗಳು ವಿದ್ಯಾರ್ಥಿಗಳಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.