Home Mangalorean News Kannada News ಡಿ.7 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಆರೋಗ್ಯ ಕಾರ್ಡ್, ವಿದ್ಯಾರ್ಥಿ ವೇತನ ವಿತರಣೆ

ಡಿ.7 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಆರೋಗ್ಯ ಕಾರ್ಡ್, ವಿದ್ಯಾರ್ಥಿ ವೇತನ ವಿತರಣೆ

Spread the love

ಡಿ.7 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಆರೋಗ್ಯ ಕಾರ್ಡ್, ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮತ್ತು ಅಕಾಡೆಮಿಕ್ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಇವರ ಸಹೋಗದೊಂದಿಗೆ ಸದಸ್ಯರಿಗೆ ಉಚಿತ ಆರೋಗ್ಯ ಸುರಕ್ಷಾ ಕಾರ್ಡ್ ಹಾಗೂ ಫೆಡರೇಷನ್ ವತಿಯಿಂದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮುಳಿಹಿತ್ಲುವಿನ ಫೆಡರೇಷನ್ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ವಹಿಸಲಿದ್ದಾರೆ.

ವಿದ್ಯಾರ್ಥಿ ವೇತನವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ಗಳನ್ನು ಮೀನುಗಾರಿಕೆ ಬಂದರು ಮತ್ತು ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆಗಳನ್ನು ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ವಿತರಿಸಲಿದ್ದಾರೆ

ಸಮಾರಂಭದಲ್ಲಿ ಮಖ್ಯ ಅತಿಥಿಗಳಾಗಿ ಐ.ಒ.ಸಿ. ಚೀಫ್ ಡಿವಿಜನಲ್ ರಿಟೇಲ್ ಸೇಲ್ಸ್ ಮ್ಯಾನೇಜರ್ ಅನೂಪ್ ಕುಶ್ವಾ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಮಣಿಪಾಲ್ ಗ್ರೂಪ್ ಇನ್ಶೂರೆನ್ಸ್ ವಿಭಾಗದ ಜನರಲ್ ಮ್ಯಾನೇಜರ್ ಯು. ಎಸ್. ಶ್ರೀಪತಿ, ದ. ಕ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಮೀನುಗಾರಿಕಾ ಉಪನಿರ್ದೇಶಕರಾದ ಡಿ. ತಿಪ್ಪೆಸ್ವಾಮಿ ಹಾಗೂ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ವಿನಯ ಕರ್ಕೇರ ಭಾಗವಹಿಸಲಿರುವುದಾಗಿ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version