Spread the love
ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ
ಮಂಗಳೂರು: ವಿವಾಹಿತ ಮಹಿಳೆಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಶುಕ್ರವಾರ ಬಜಪೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, ವಿವಾಹಿತೆ ಶಿಲ್ಪಾ (28) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಸುಮಾರು ಹನ್ನೊಂದು ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹತ್ತು ತಿಂಗಳ ಮಗು ಹೊಂದಿರುವ ಇವರು ಕೆಲ ಸಮಯದ ಹಿಂದೆ ತಾಯಿ ಮನೆಗೆ ಬಂದಿದ್ದರು. ಸಾಯುವ ಮುನ್ನ ಈಕೆಯು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love