ತಿರಂಗಾ ಯಾತ್ರೆಗೆ ಅಮಿತ್ ಶಾ ಚಾಲನೆ
ಮಂಗಳೂರು: ದೇಶದ 70ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ತಿರಂಗಾ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಮಂಗಳೂರಿನ ರ್ಯಾಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು.
ಭಾನುವಾರ ಬೆಳಗ್ಗಿನ ಜಾವ 4.30 ಕ್ಕೆ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಮಿತ್ ಶಾ ಅವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲಿಂದ ಅವರು ಸರ್ಕ್ಯೂಟ್ ಹೌಸಿಗೆ ತೆರಳಿದರು.
ಅಲ್ಲಿಂದ ಪಕ್ಷದ ಕಛೇರಿಗೆ ಆಗಮಿಸಿದ ಶಾ ಅವರು ಕಚೇರಿಯ ಬಳಿ ಗಿಡವನ್ನು ನೆಟ್ಟು, ಪಕ್ಷದ ನಾಯಕರನ್ನು ಭೇಟಿಯಾದರು.
ಬಳಿಕ ಪಂಪ್ವೆಲ್ ಸರ್ಕಲ್ ಬಳಿಕ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.
ಬಳಿಕ ಹೆಲ್ಮೆಟ್ ಧರಿಸಿ ತ್ರಿವರ್ಣ ಧ್ವಜ ಸಹಿತ ಸಂಸದ ನಳಿನ್ ಕುಮಾರ್ ಕಟೀಲ್ ಚಲಾಯಿಸುತ್ತಿದ್ದ ಬುಲೆಟ್ ಬೈಕಿನಲ್ಲಿ ಕುಳಿತು ರ್ಯಾಲಿಯಲ್ಲಿ ಪಾಲ್ಗೊಂಡರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ, ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಮಾಜಿ ಸಚಿವ ಸಿ ಟಿ ರವಿ, ಶಾಸಕ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು ಸಹಿತ ನೂರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡರು.