Home Mangalorean News Kannada News ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ

Spread the love

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ
 
ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.

ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.

ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರ ಆರು ದಿನಗಳೂ ಈ ರೈಲು ಸಂಚರಿಸಲಿದೆ.

‘ನನ್ನ ಕೋರಿಕೆಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version