ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಶುಕ್ರವಾರ ಸಂಜೆ ನೆರವೇರಿಸಿದರು.
ವಿಶ್ವದಾದ್ಯಂತ ಚದುರಿಹೋಗಿರುವ ತುಳು ಶಿವಳ್ಳಿ ಬ್ರಾಹ್ಮಣರನ್ನು ಒಗ್ಗೂಡಿಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶವಾಗಿದ್ದು, ವಿಶಿಷ್ಟವಾದ ಶಿವಳ್ಳಿ ತುಳು ಭಾಷೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ಕುರಿತು ಸಮಾಜ ಬಾಂಧವರಲ್ಲಿ ಜಾಗೃತಿ ಮೂಡಿಸಿ, ಅವುಗಳನ್ನು ಉಳಿಸಿ ಬೆಳೆಸಲು ಪ್ರೇರಣೆ ನೀಡುವುದು ಈ ಸಮ್ಮೇಳನದ ಪ್ರಧಾನ ಉದ್ದೇಶವಾಗಿದೆ.
ಎರಡು ದಿನಗಳಲ್ಲಿ ಸಮ್ಮೇಳನದಲ್ಲಿ ಧಾರ್ಮಿಕ ಸಮಾವೇಶ, ಉದ್ಯಮಶೀಲತಾ ಸಮಾವೇಶ, ಶೈಕ್ಷಣಿಕ ಸಮಾವೇಶ, ತುಳು ಶಿವಳ್ಳಿ ಸಮಾಜ ಅಂದು-ಇಂದು – ಮುಂದು ವಿಚಾರಗೋಷ್ಠಿ,ಮಹಿಳಾ ಸಮಾವೇಶ, ಯುವ ವಿಭಾಗ ಸಮಾವೇಶ, ಧಆರ್ಮಿಕ ಚಿಂತನಾ ಗೋಷ್ಠಿ, ಸಾಧಕರ ಸಮಾವೇಶಗಳು ನಡೆಯಲಿವೆ. 15ರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಅಲ್ಲದೇ ಪ್ರತಿದಿನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.