ತ್ರಾಸಿ ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕುಂದಾಪುರ: ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಂಪತಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕುಂದಾಪುರ ಗುಜ್ಜಾಡಿ ನಿವಾಸಿಗಳಾದ ವಿನಾಯಕ (41) ಮತ್ತು ಆತನ ಪತ್ನಿ ಪ್ರಮೀಳಾ (30) ಎಂದು ಗುರುತಿಸಲಾಗಿದೆ.
ಜನವರಿ 21 ರಂದು ಬೆಳಿಗ್ಗೆ 10:15 ಗಂಟೆಯಿಂದ 11:30 ಗಂಟೆಯ ಮದ್ಯಾವಧಿಯಲ್ಲಿ ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ತ್ರಾಸಿ ಬೀಚ್ ಬಳಿ ಇರುವ ಉದಯ ಪೂಜಾರಿರವರ ಮನೆಯ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್ನ ಜೀಪ್ ತೆಗೆದು ಬ್ಯಾಗ್ ನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪಿ.ಎಸ್.ಐ ಹರೀಶ್ ಆರ್ ಹಾಗೂ ಸಿಬ್ಬಂದಿಗಳಾದ ಶಾಂತರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ ಹಾಗೂ ದಿನೇಶ್ ರವರು ಮನೆ ಕಳ್ಳತನದ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ, ಆರೋಪಿಗಳನ್ನು ವಶಕ್ಕೆ ಪಡೆದು ಕಳುವಾದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1, ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ, ಇವುಗಳ ಒಟ್ಟುಮೌಲ್ಯ 2,00,000/- ರೂಪಾಯಿ ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ KA 20 EK 6304 ನಂಬ್ರದ ಟಿ.ವಿ.ಎಸ್ ಮೋಟಾರ್ ಸ್ಕೂಟಿಯನ್ನು ಸ್ವಾಧೀನ ಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.