ದಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂದಿಲ್ ನೇಮಕ
ಮಂಗಳೂರು: ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ. ಕೆ.ಜಿ.ಜಗದೀಶ ಅವರನ್ನು ರಾಜ್ಯ ಗಣಿ ಮತ್ತು ಭೂವಿಜ್ಞಾ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಿ ಮಂಗಳವಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾಗಿ ಹೋಗುತ್ತಿರುವ ಡಾ. ಕೆ.ಜಿ. ಜಗದೀಶ ಅವರ ಸ್ಥಳಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂದಿಲ್ ಅವರನ್ನು ನೇಮಿಸಿದೆ.
ನೂತನವಾಗಿ ನೇಮಕಗೊಂಡಿರುವ ಜಿಲ್ಲಾಧಿಕಾರಿ ಶಶಿಕಾಂತ್ ಸೆಂದಿಲ್ ಅವರು 2009 ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದು, ನಿರ್ಗಮನ ಜಿಲ್ಲಾಧಿಕಾರಿ ಜಗದೀಶ ಅವರು 2016 ಜುಲೈ ತಿಂಗಳಿನಲ್ಲಿ ದಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.