ದಕ ಜಿಲ್ಲಾ ಯುವ ಜೆಡಿಎಸ್ ಮಹಾಪ್ರದಾನ ಕಾರ್ಯದರ್ಶಿಯಾಗಿ ಸತ್ಯನಾರಾಯಣ ಚಿಮ್ಟಿಕಲ್ಲು ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯನ್ನಾಗಿ ಸುಳ್ಯ ತಾಲೂಕಿನ ಸತ್ಯನಾರಾಯಣ ಚಿಮ್ಟಿಕಲ್ಲು ಇವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇಮಕ ಮಾಡಿದ್ದಾರೆ.
ದಕ ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಹಾಗೂ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದ್ದಾರೆ.