Spread the love
ದಕ ಜಿಲ್ಲೆಯಲ್ಲಿ ಕೊರೋನಾ ಗೆ ಮತ್ತೆ ಐದು ಬಲಿ – ಸಾವಿನ ಸಂಖ್ಯೆ 36ಕ್ಕೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೆ ಐದು ಮಂದಿ ಬಲಿಯಾಗಿದ್ದಾರೆ ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಬೆಳಿಗ್ಗೆ ಸುರತ್ಕಲ್ ಹೊಸಬೆಟ್ಟು ನಿವಾಸಿ ಯುವಕ ಕೊರೊನಾಗೆ ಸಾವನ್ನಪ್ಪಿದ್ದು ನಂತರ ಇತರ ಐದು ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ಹೇಳಿವೆ.
ಉಳ್ಳಾಲದ 67 ವರ್ಷದ ವ್ಯಕ್ತಿ, ಫಳ್ನೀರ್ ನ 65 ವರ್ಷದ ವ್ಯಕ್ತಿ ಮತ್ತು ತೊಕ್ಕೊಟ್ಟುವಿನ 58 ವರ್ಷದ ಮಹಿಳೆ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟರೆ ಉಳಿದಿಬ್ಬರು ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ.
Spread the love