ದಕ ಜಿಲ್ಲೆಯಲ್ಲಿ ಗುರುವಾರದಿಂದ ಬಟ್ಟೆಯಂಗಡಿ ಓಪನ್
ಮಂಗಳೂರು: ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದ್ದಾರೆ.
ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.