ದಕ ಜಿಲ್ಲೆಯಲ್ಲಿ ಬುಧವಾರ 73 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬುಧವಾರ 73 ಮಂದಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2525ಕ್ಕೆ ಏರಿಕೆಯಾಗಿದೆ.
ಬುಧವಾರ ಪತ್ತೆಯಾದ ಸೋಂಕಿತರಲ್ಲಿ 11 ಮಂದಿ ಪ್ರಾಥಮಿಕ ಸಂಪರ್ಕದಿಂದ, 23 ಮಂದಿ ಐಎಲ್ ಐ , 3 ಸಾರಿ, 3 ಮಂದಿ ಅಂತರಾಷ್ಟ್ರೀಯ ಪ್ರಯಾಣ, ಒಬ್ಬರು ಅಂತರ್ ಜಿಲ್ಲಾ ಪ್ರಯಾಣದಿಂದ ಸೋಂಕು ದೃಢಗೊಂಡಿದೆ. ಅಲ್ಲದೆ 32 ಮಂದಿಯ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.