ದಕ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟವ್ ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಇಬ್ಬರಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಮುಂಬೈನಿಂದ ವಾಪಾಸಾಗಿರುವ 30 ಹರೆಯದ ವ್ಯಕ್ತಿ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 55 ವರ್ಷ ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಗೊಂಡಿದೆ.
ಇಬ್ಬರನ್ನು ಕೂಡ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಮಹಿಳೆಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.