ದಕ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
ಮಂಗಳೂರು: ಲಾಕ್ಡೌನ್ನ ನಾಲ್ಕನೇ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಆರಂಭಿಸಿದ್ದು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಸಂಚಾರ ಮಂಗಳವಾರ ತನ್ನ ಸಂಚಾರ ಆರಂಭಿಸಿದೆ.
ಕೊರೋನ ವೈರಸ್ ಹರಡದಂತೆ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಲು ಅನುಕೂಲವಾಗುವಂತೆ ಶೇ.50ರಷ್ಟು ಮಂದಿಯನ್ನು ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಮಂಗಳೂರಿನಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೂ ಮಾತ್ರ ಈ ಬಸ್ ಗಳು ಸಂಚರಿಸಲಿವೆ.