ದಸರಾ ಪ್ರಯುಕ್ತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

Spread the love

ದಸರಾ ಪ್ರಯುಕ್ತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಮಂಗಳೂರು: ದಸರಾ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅಕ್ಟೋಬರ್ 16-20 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 16 ರಿಂದ 20 ರವರೆಗೆ ವಿವಿಧ ದಿನಾಂಕಗಳಂದು ಜರುಗುವ ಶಾರದಾ ವಿಗ್ರಹದ ಶೋಭಾಯಾತ್ರೆ ಮೆರವಣಿಗೆ ಸಮಯ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಸೇರುವ ಶಾರದಾ ವಿಗ್ರಹದ ಶೋಭಾಯಾತ್ರೆ ಮೆರವಣಿಗೆ ನಡೆಯುವ ಸಮಯದಲ್ಲಿ ವೈನ್ ಶಾಪ್/ಬಾರ್ ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


Spread the love