ದಿನಚರ್ಯ ಋತುಚರ್ಯ ಪಾಲನೆ ಅಗತ್ಯ : ಡಾ.ಸುರೇಶ್ ನೆಗಲಗುಳಿ
ಮಂಗಳೂರು : ಆಧುನಿಕ ಜೀವನಶೈಲಿಯ ವ್ಯಾಧಿಗಳಿಗೆ ಆಯುರ್ವೇದದಲ್ಲಿ ಉತ್ತಮವಾಗಿ ಚಿಕಿತ್ಸೆ ನೀಡಬಹುದು ಎಂದು ಡಾ. ಸುರೇಶ್ ನೆಗಲಗುಳಿ- ಅವರು ಹೇಳಿದ್ದಾರೆ.
ಜಿಲ್ಲಾ ಆಯುಷ್ ಇಲಾಖಾ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಡಾ:ವಿವೇಕಾನಂದ ಪ್ರಭು ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಕಾರ್ಯಕ್ರಮದಲ್ಲಿ “ಆಧುನಿಕ ಜೀವನ ಶೈಲಿಯ ವ್ಯಾಧಿಗಳು ಮತ್ತು ಅದರ ಆಯುರ್ವೇದ ಪರಿಹಾರ” ಕುರಿತು ಅವರು ಉಪನ್ಯಾಸ ನೀಡಿದರು.
ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣರಾವ್, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸವಿತಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮದ್ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಔಷಧಿಗಿಡಗಳ ಪ್ರದರ್ಶನ ಹಾಗೂ ಮಾಹಿತಿ ನೀಡಲಾಯಿತು.