Spread the love
ದ.ಕ ಜಿಲ್ಲೆಯಲ್ಲಿ ಕೊರಾನಾ ಸೋಂಕಿಗೆ ಮತ್ತೊಂದು ಸಾವು
ಮಂಗಳೂರು: ಕೊರೋನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಬಲಿಯಾಗಿದ್ದು ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.
ಬೆಳ್ತಂಗಡಿ ನಿವಾಸಿ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಸಾವಿನ ಬಳಿಕ ಅವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ಅವರ ವಾಸಸ್ಥಳ ಸೇರಿದಂತೆ ಅವರು ಎಲ್ಲಿ ಹೋಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಪ್ರಾರಂಭದಲ್ಲಿ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಿದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Spread the love