Home Mangalorean News Kannada News ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಂಮತ್ರಿ ಕುಮಾರಸ್ವಾಮಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಂಮತ್ರಿ ಕುಮಾರಸ್ವಾಮಿ

Spread the love

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಂಮತ್ರಿ ಕುಮಾರಸ್ವಾಮಿ

ಮಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ(ಮೇ 23) ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ, ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸನ್ಮಾನಿಸಿದ ಕುಮಾರಸ್ವಾಮಿ ಹೆಗ್ಗಡೆ ಅವರೊಂದಿಗೆ ಕೆಲ ಸಮಯ ಮಾತುಕತೆ ನಡೆಸಿದರು.

ಬೆಳಗ್ಗೆ 9:05ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ ಬಂದಿಳಿದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಪಕ್ಷದ ಜಿಲ್ಲಾ ನಾಯಕರು, ಕಾರ್ಯಕರ್ತರು ಸ್ವಾಗತಿಸಿದರು.

ಬಳಿಕ ಅವರು ಅಲ್ಲಿಂದ ಕಾರಿನಲ್ಲಿ ಶ್ರೀ ಕ್ಷೇತ್ರಕ್ಕೆ ಧರ್ಮಸ್ಥಳಕ್ಕೆ ತೆರಳೀ ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನ ಭೇಟಿ ಮಾಡಿ ಹಾರ ಹಾಕಿ ಫಲಪುಷ್ಪ ನೀಡಿ ಗೌರವಿಸಿದರು. ನಂತರ ವೀರೇಂದ್ರ ಹೆಗ್ಡೆ ಅವರಿಂದ ಆಶೀರ್ವಾದ ಪಡೆದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ “ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣಕ್ಕೆ ಬೆಲೆ ಕೊಡಬೇಡಿ. ಕರಾವಳಿಯ ಜನರು ಸಹಬಾಳ್ವೆಯಿಂದ ಬದುಕಬೇಕಿದೆ” ಎಂದು ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆಬಳಿಕ 11.45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿ ದೇವಸ್ಥಾನದತ್ತ ಪ್ರಯಾಣ ಬೆಳೆಸಿದರು.


Spread the love

Exit mobile version