Home Mangalorean News Kannada News ನವೆಂಬರ್ 19: ಉಡುಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ-ಪೂರ್ವಭಾವಿ ಸಭೆ

ನವೆಂಬರ್ 19: ಉಡುಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ-ಪೂರ್ವಭಾವಿ ಸಭೆ

Spread the love

ನವೆಂಬರ್ 19: ಉಡುಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ – ಪೂರ್ವಭಾವಿ ಸಭೆ

ಉಡುಪಿ : ಉಡುಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 19ರಂದು ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಮೈಸೂರಿನಿಂದ ಅಪರಾಹ್ನ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 3 ಗಂಟೆಗೆ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲಾ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲಿರುವರು ಬಳಿಕ ಬೋರ್ಡ್ ಹೈಸ್ಕೂಲ್‍ನಲ್ಲಿ ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವರು ಎಂದು ಸಚಿವರು ಮಾಹಿತಿ ನೀಡಿದರು.

ಈ ಸಂಬಂಧ ಸೂಕ್ತ ವ್ಯವಸ್ಥೆಯನ್ನು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಸಚಿವರು ಸೂಕ್ತ ನಿರ್ದೇಶನಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆಯವರು ಪಾಲ್ಗೊಂಡರು.


Spread the love

Exit mobile version