Home Mangalorean News Kannada News ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ – ಸೂರ್ಯ ಕುಮಾರ್ ಯಾದವ್

ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ – ಸೂರ್ಯ ಕುಮಾರ್ ಯಾದವ್

Spread the love

ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ – ಸೂರ್ಯ ಕುಮಾರ್ ಯಾದವ್

  • ವರ್ಲ್ಡ್ ಕಪ್ ಕ್ಯಾಚ್ ವಿವಾದ ಕುರಿತು ಸೂರ್ಯ ಕುಮಾರ್ ಯಾದವ್ ಪ್ರತಿಕ್ರಿಯೆ

ಉಡುಪಿ: ಟಿ 20 ವಿಶ್ವಕಪ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯುವ ಸಂದರ್ಭ ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ ಎಂದು ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಹೇಳಿದರು

ಅವರು ಮಂಗಳವಾರ ಕಾಪು ಹೊಸಮಾರಿಗುಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಕ್ಯಾಚ್ ಬಗ್ಗೆ ಚರ್ಚೆ ವಿವಾದ ವಿಚಾರದಲ್ಲಿ ಮಾತನಾಡಿ ಕ್ಯಾಚ್ ಹಿಡಿದು ಎಂಟು ದಿವಸ ಆಯಿತು ಆನಿವರ್ಸರಿ ಕಳೆದು ಎಂಟು ದಿವಸ ಆಯಿತು. ಕ್ಯಾಚ್ ಹಿಡಿಯುವ ಸಂದರ್ಭ ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ ನಮಗೆ ಪ್ರಪಂಚದ ಎಲ್ಲಾ ಜನರನ್ನ ಖುಷಿ ಪಡಿಸಲು ಸಾಧ್ಯವಿಲ್ಲ. ದೇವರ ಆಶೀರ್ವಾದದಿಂದ ನಾನು ಆ ಸಂದರ್ಭ ಆ ಜಾಗದಲ್ಲಿ ಇದ್ದೆ ಅಂತಹ ಒಂದು ಅದ್ಭುತ ಕ್ಯಾಚ್ ಹಿಡಿಯುವ ಅವಕಾಶ ನನಗೆ ಸಿಕ್ಕಿತು ಎಂದರು.

ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಗಿದ್ದು ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಗಿದೆ. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದ್ದು, ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ.

ವಿಶ್ವಕಪ್ ವಿಜಯೋತ್ಸವಕ್ಕೆ ಜನಸ್ತೋಮ ನೋಡಿ ಬಹಳ ಖುಷಿಯಾಗಿದ್ದು, ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡದ್ದು ಮನಸ್ಸಿಗೆ ಮುಟ್ಟಿತು. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ ಎಂದರು.

ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ ಆದರೆ ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿಯಾಗಿದ್ದು ದೇವರು ಇಚ್ಚಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ ಎಂದರು.

ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗಿದ್ದೇವೆ ಮನಸ್ಸಿಗೆ ಶಾಂತಿ ಸಿಕ್ಕಿದ್ದು, ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ. ನಾನು ಯಾವುದೇ ಸೆಲೆಬ್ರಿಟಿಯಾಗಿ ಬಂದಿಲ್ಲ ನಾನೊಬ್ಬ ಸೆಲೆಬ್ರಿಟಿ ಎಂಬ ಆಲೋಚನೆಯ ನನಗೆ ಬಂದಿಲ್ಲ ಬದಲಾಗಿ ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಾಗಿದೆ ಎಂದರು.

ವರ್ಲ್ಡ್ ಕಪ್ ಅನ್ನುವುದು ಇಡೀ ಜೀವನ ಅಲ್ಲ ಅದೊಂದು ಭಾಗ ಅಷ್ಟೇ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಾಗಿದೆ. ಮಂಗಳೂರಿನಲ್ಲಿ ಆನಿವರ್ಸರಿಯನ್ನು ಆಚರಿಸಿಕೊಂಡಿದ್ದೇವೆ ಜೀವನದಲ್ಲಿ ಒಂದೇ ಬಾರಿ ಇಷ್ಟು ಕೇಕ್ ಗಳನ್ನು ನಾನು ಕಟ್ ಮಾಡಿಲ್ಲ ತಿಂದಿಲ್ಲ ಎಂದರು.

ನಾನು ಮೈದಾನಕ್ಕೆ ಇಳಿಯುವಾಗ ಬಬುಲ್ ಗಂ ಹಾಕಲು ಇಷ್ಟಪಡುತ್ತೇನೆ, ಬ್ಯಾಟಿಂಗ್ ಮಾಡಲು ಮತ್ತು ಚೆನ್ನಾಗಿ ಆಡಲು ಬಬುಲ್ ಗಂ ಜಗಿಯುವುದು ನನಗೆ ಖುಷಿ ಕೊಡುತ್ತದೆ. ಬಬುಲಗಾಂ ಜಗಿಯುತ್ತ ನಾನು ಆ ಸಂದರ್ಭವನ್ನು ಇಷ್ಟಪಡುತ್ತೇನೆ ಒಂದು ಸಣ್ಣ ಚಿವಿಂಗ್ ಗಂ ಹಾಕಿಕೊಂಡು ನಾನು ಆ ಸಂದರ್ಭವನ್ನು ಸಂಭ್ರಮಿಸುತ್ತೇನೆ ಎಂದ ಅವರು ಪ್ರಾಕ್ಟೀಸ್ ಮಾಡುವಾಗ ಅಂತಹ ಕ್ಯಾಚ್ಗಳನ್ನ ಹಿಡಿಯಲು ನಾವು ತರಬೇತಿ ಪಡೆಯುತ್ತೇವೆ. ದೇಶಕ್ಕೆ ಕಪ್ ತಂದುಕೊಡಲು ಅಂತಹ ಸಂದರ್ಭವನ್ನು ದೇವರ ಸೃಷ್ಟಿ ಮಾಡಿದ್ದಾನೆ ಆ ಸಂದರ್ಭದಲ್ಲಿ ನಾನು ದೇವರನ್ನು ನೆನೆದುಕೊಂಡೆ ಎಂದರು.

ಸೂರ್ಯ ಕುಮಾರ್ ಪತ್ನಿ ದೇವಿಶಾ ಮಾತನಾಡಿ ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದ್ದು, ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನ ಭೇಟಿ ಮಾಡಬೇಕು ಎಂಬ ಇಚ್ಛೆ ಇತ್ತು ಹಾಗಾಗಿ ಇಂದು ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ ಎಂದರು.

ದೇವಿಯಲ್ಲಿ ಏನು ಪ್ರಾರ್ಥಿಸಿದ್ದೇನೆ ಎಂದು ಹೇಳುವುದಿಲ್ಲ ಆದರೆ ದೇವರಿಗೆ ಸೇವೆ ಕೊಡಬೇಕು ಎಂಬ ಸಂಕಲ್ಪ ಇತ್ತು ದೇವರಿಗೆ ಸಲ್ಲಿಸಿದ ಕಾಣಿಕೆಯನ್ನು ಹೇಳಿಕೊಳ್ಳಲು ಇಷ್ಟವಿಲ್ಲ. ಭಾರತವನ್ನು ಪ್ರತಿನಿಧಿಸಬೇಕು ಮತ್ತು ವರ್ಲ್ಡ್ ಕಪ್ ಗೆಲ್ಲಬೇಕು ಎಂಬುದು ಎಲ್ಲಾ ಕ್ರಿಕೆಟ್ ಗಳ ಕನಸು. ಒಂದು ಕನಸು ಸಾಕಾರಗೊಂಡಿದೆ ಎಂಬ ಖುಷಿ ಇದ್ದು ಇಂತಹ ಹಲವಾರು ಕನಸುಗಳನ್ನು ಕಂಡು ಮುಂದೆ ಸಾಗಬೇಕಾಗಿದೆ ಎಂದರು.


Spread the love

Exit mobile version