ನಾರಾವಿ: ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು
ಬೆಳ್ತಂಗಡಿ: ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ.
ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ವೇಣೂರು ಪೋಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.