ನಾಳೆ (ಜು 19) ದಕ ಜಿಲ್ಲೆಯ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ ಅನುದಾನಿ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ