Home Mangalorean News Kannada News ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಿ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಿ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

Spread the love

ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಿ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಮಂಗಳೂರು: ನ್ಯಾಯಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ಸಜ್ಜಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್‍ನಲ್ಲಿ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು, ಎಲ್ಲ ಅಧಿಕಾರಿಗಳು ಚುನಾವಣಾ ಕರ್ತವ್ಯದ ಗಂಭೀರತೆಯನ್ನು ಅರಿತು ಚುನಾವಣಾ ಆಯೋಗದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಿ; ಎಲ್ಲೂ ಪಕ್ಷಪಾತವಾಗಿದೆ ಎಂಬ ಆರೋಪಗಳಿಗೆ ಅವಕಾಶ ನೀಡಬಾರದು ಎಂದು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

ಚುನಾವಣಾ ಕರ್ತವ್ಯದಲ್ಲಿ ನಿರತ ಪೊಲೀಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಕರ್ತವ್ಯ ವೇಳೆ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ ಎಂದರು.

ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿ ಹಾಗೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಸೆಲ್ವಮಣಿ ಆರ್ ಅವರು ಎಂಸಿಸಿ ನೋಡಲ್ ಅಧಿಕಾರಿ, ಸ್ವೀಪ್ ಸಮಿತಿ ಮುಖ್ಯಸ್ಥರು ಮತ್ತು ಚುನಾವಣಾ ವೆಚ್ಚ ಪರಿಶೀಲನಾ ಅಧಿಕಾರಿಯೂ ಆಗಿರುವರು. ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿ ಲಕ್ಷ್ಮೀ ಪ್ರಸಾದ್ ಮತ್ತು ಇತರ ಅಧಿಕಾರಿಗಳು ಪಾಲ್ಗೊಂಡರು.

ಸಂಜೆ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ವಲ್‍ನರಬೇಲ್ ಮ್ಯಾಪಿಂಗ್ ಮತ್ತು ಚುನಾವಣಾ ಆಯೋಗಕ್ಕೆ ಕಳುಹಿಸಲಿರುವ ವರದಿಗಳ ಬಗ್ಗೆ ನೋಡಲ್ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು. ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.


Spread the love

Exit mobile version