Home Mangalorean News Kannada News ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ

ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ

Spread the love

ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ

ಮೂಡುಬಿದಿರೆ: ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 15ರಿಂದ 17ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದ್ದ `ಆಳ್ವಾಸ್ ನುಡಿಸಿರಿ-ವಿರಾಸತ್’ ಸಮ್ಮೇಳನಗಳನ್ನು ಮುಂದೂಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

26 ವರ್ಷಗಳಿಂದ ಆಳ್ಚಾಸ್ ವಿರಾಸತ್ ಮತ್ತು 15 ವರ್ಷಗಳಿಂದ ಆಳ್ವಾಸ್ ನುಡಿಸಿರಿಯನ್ನು ಸಂಸ್ಥೆ ವತಿಯಿಂದ ಆಚರಿಸಿಕೊಂಡು ಬಂದಿರುತ್ತೇವೆ. ಈ ವರ್ಷ ಆಳ್ವಾಸ್ ನುಡಿಸಿರಿ-ವಿರಾಸತ್ ಅವಳಿ ಸಮ್ಮೇಳನಗಳನ್ನು ಜಂಟಿಯಾಗಿ ನಡೆಸಲು ನಿರ್ಧರಿಸಿದ್ದು, ಸಿದ್ಧತೆಗಳು ಕೂಡ ಆರಂಭಗೊಂಡಿದೆ. ಆದರೆ ರಾಜ್ಯದಲ್ಲಿ ಉಂಟಾದ ಭಾರಿ ನೆರೆಹಾವಳಿಯಿಂದಾಗಿ ಸಾಕಷ್ಟು ಆಸ್ತಿ ಪಾಸ್ತಿ ನಾಶವಾಗಿ ಸಾವಿರಾರು ಕುಟುಂಬಗಳ ಬದುಕು ಅತಂತ್ರ ಸ್ಥಿತಿಯಲ್ಲಿದೆ. ನಮ್ಮ ಬಂಧುಗಳು ಸಂಕಷ್ಟದ ಸ್ಥಿತಿಯಲ್ಲಿರುವಾಗ ನಾವು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ ಎಂದು ಭಾವಿಸಿ ಈ ಎರಡೂ ಸಮ್ಮೇಳನವನ್ನು 2020ಕ್ಕೆ ಮುಂದೂಡಲಾಗಿದೆ ಹಾಗೂ ನೆರೆ ಸಂತ್ರಸ್ಥರಿಗೆ ಆರ್ಥಿಕ ಸಹಾಯ ನೀಡಿ ಅವರ ಕಷ್ಟದಲ್ಲಿ ಭಾಗಿಯಾಗಲು ನಮ್ಮ ಸಂಸ್ಥೆ ನಿರ್ಧರಿಸಿದೆ ಎಂದು ಮೋಹನ ಆಳ್ವ ತಿಳಿಸಿದರು.

ಆಳ್ವಾಸ್ ನುಡಿಸಿರಿ ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪಿಆರ್‍ಒ ಡಾ.ಪದ್ಮನಾಭ ಶೆಣೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love

Exit mobile version