Home Mangalorean News Kannada News ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ

ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ

Spread the love
RedditLinkedinYoutubeEmailFacebook MessengerTelegramWhatsapp

ನ.25-27: ವಳಕಾಡು ಶಾಲೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ

ಉಡುಪಿ : ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟವು ನ.25, 26 ಮತ್ತು 27ರಂದು ವಳಕಾಡು ಶಾಲೆಯಲ್ಲಿ ನಡೆಯಲಿದೆ.

volakadu-school-karate-championship

ನ.25ರಂದು ಸಂಜೆ 4ಕ್ಕೆ ಜೋಡುಕಟ್ಟೆಯಿಂದ ಹಳೆ ಡಯಾನಾ ಮಾರ್ಗವಾಗಿ ವಳಕಾಡು ಶಾಲೆಯವರೆಗೆ ಪುರಮೆರವಣಿಗೆ ನಡೆಯಲಿದ್ದು, ಸಂಜೆ 5ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಾಕೂಟ ಉದ್ಘಾಟಿಸಲಿರುವರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇs… ಭಾಗವಹಿಸಲಿದ್ದಾರೆ ಎಂದು ಸಂಘಟನಾ ಸಮಿತಿ ಪ್ರ. ಕಾರ್ಯದರ್ಶಿ ಅಮೃತ್‌ ಶೆಣೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ಶಾಲಾ ವಿದ್ಯಾರ್ಥಿಗಳಿಂದಅಂಬಾ ಪ್ರತಾಪ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ನ.27ರಂದು ಪೂರ್ವಾಹ್ನ 11:30ಕ್ಕೆ ನಡೆಯುವ ಸಮಾರೋಪಸಮಾರಂಭದ ಅಧ್ಯಕ್ಷತೆಯನ್ನು ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ವಹಿಸಲಿದ್ದಾರೆ. ಇದೇ ಸಂದರ್ಭ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರೌಢಶಾಲಾ ಮುಖ್ಯಶಿಕ್ಷಕಿ ನಿರ್ಮಲಾ ಬಿ., ರವಿರಾಜ್‌ ನಾಯಕ್‌, ನಾಗಭೂಷಣ್‌, ನಿತ್ಯಾನಂದ ಕೆಮ್ಮಣ್ಣು, ಮಧುಕರ್‌ ಎಸ್‌. ಉಪಸ್ಥಿತರಿದ್ದರು.


Spread the love

Exit mobile version