ನ.30ಕ್ಕೆ ಬಸ್ರೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ಲೋಕ ಅನಾವರಣ

Spread the love

ನ.30ಕ್ಕೆ ಬಸ್ರೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ಲೋಕ ಅನಾವರಣ

ಕುಂದಾಪುರ: ಹಿರಿಯ ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ 90 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅವರ 90ನೇ ಜನ್ಮದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸಬೇಕು ಎನ್ನುವ ನೆಲೆಯಲ್ಲಿ ಇದೇ ಡಿ.24 ರಂದು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಆವರಣದಲ್ಲಿ ‘ ಅಪ್ಪಣ್ಣ ಹೆಗ್ಡೆ -90 ‘ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ನ.30 ರಂದು ಸಂಜೆ 6 ರಿಂದ ಬಸ್ರೂರು ಶ್ರೀ ಶಾರದಾ ಕಾಲೇಜು ಆವರಣದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 400 ವಿದ್ಯಾರ್ಥಿ ಕಲಾವಿದರು ‘ ಆಳ್ವಾಸ್ ಸಾಂಸ್ಕೃತಿಕ ಲೋಕ ‘ ಎನ್ನುವ ವಿಶೇಷ ಧ್ವನಿ-ಬೆಳಕಿನ ಸಂಯೋಜನೆಯ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವನ್ನು ಸಾದರಪಡಿಸಲಿದ್ದಾರೆ ಎಂದು ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು 2.30 ಗಂಟೆಗಳ ಕಾಲ ನಿರಂತರವಾಗಿ ನಡೆಯಲಿರುವ ಈ ಕಾರ್ಯಕ್ರಮವು ಆಳ್ವಾಸ್‌ನ ಈ ಹಿಂದಿನ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗಿಂತ ತೀರಾ ಭಿನ್ನವಾಗಿದೆ. ಕಲೆ, ಸಂಗೀತ ಹಾಗೂ ಶಿಕ್ಷಣ ಪ್ರೇಮಿಗಳೂ ಆಗಿರುವ ಬಿ.ಅಪ್ಪಣ್ಣ ಹೆಗ್ಡೆಯವರ ಮೇಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರೀತ್ಯರ್ಥವಾಗಿ, ಅವರಿಗೆ ಸಮರ್ಪಿಸಲೋಗ ಈ ಕಾರ್ಯಕ್ರಮವನ್ನು ವಿಶೇಷವಾಗಿ ಸಂಯೋಜಿಸಿ ಸಾದರಪಡಿಸಲಾಗುತ್ತಿದೆ. ಬಸ್ರೂರು ಹಾಗೂ ಕುಂದಾಪುರ ಆಸುಪಾಸಿನ ಭಾಗದ ಕಲಾಸಕ್ತರಿಗೆ ಈ ಕಾರ್ಯಕ್ರಮ ವಿಶೇಷ ಅನುಭವ ನೀಡಲಿದೆ ಎಂದು ಬಿ.ಅಪ್ಪಣ್ಣ ಹೆಗ್ಡೆ ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ.ಎಂ.ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments