ಪಂಚಾಯಿತಿ ಚುನಾವಣೆ: ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ

Spread the love

ಪಂಚಾಯಿತಿ ಚುನಾವಣೆ: ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ
ಮಂಗಳೂರು  : 2018ರ ಎಪ್ರಿಲ್ ಮಾಹೆಯಿಂದ ಜೂನ್ ಮಾಹೆಯವರೆಗೆ ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಫೆಬ್ರವರಿ 18 ರಂದು ಮತದಾನ ಮತ್ತು ಫೆಬ್ರವರಿ 19 ರಂದು ಮರು ಮತದಾನದ ಅವಶ್ಯವಿದ್ದಲ್ಲಿ ಹಾಗೂ ಫೆಬ್ರವರಿ 20 ರಂದು ಮತ ಎಣಿಕೆ ಕಾರ್ಯವು ನಡೆಯಲಿದ್ದು, ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತದಿಂದ ಮತ್ತು  ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಚುನಾವಣೆ ಅವಧಿಯಲ್ಲಿ ನಿಗದಿಪಡಿಸಿದ ದಿನಗಳಂದು ಮದ್ಯ ಮತ್ತು ಇತರ ಅಮಲೇರಿಸುವ ಪದಾರ್ಥಗಳ ಮಾರಾಟಗಳನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆಯಂತೆ ಮದ್ಯ ಮಾರಾಟವನ್ನು ನಿಷೇಧಿಸಿ ಮದ್ಯದಂಗಡಿಗಳನ್ನು ನಿಷೇಧಿಸ ಬೇಕಾಗಿದೆ.
ರಾಜ್ಯ ಚುನಾವಣಾ ಆಯೋಗದ ಉಲ್ಲೇಖಿತ ಪತ್ರದಲ್ಲಿ ನೀಡಿರುವ ನಿರ್ದೇಶನ ಮತ್ತು ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 ಸಿ ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನವು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತದಿಂದ ಕೂಡಿದ ಶಾಂತಿಯುತ  ವಾತಾವರಣದಲ್ಲಿ  ನಡೆಯುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಎಸ್. ಸಸಿಕಾಂತ್ ಸೆಂಥಿಲ್, ಐ.ಎ.ಎಸ್.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ, ಪುದು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮತದಾನದ ಸಲುವಾಗಿ ಫೆಬ್ರವರಿ 17 ರಂದು ಮಧ್ಯರಾತ್ರಿಯಿಂದ ಫೆಬ್ರವರಿ 18 ರಂದು ಮಧ್ಯ ರಾತ್ರಿಯವರೆಗೆ ಮತ್ತು ಫೆಬ್ರವರಿ 19 ರಂದು ಮರು ಮತದಾನದ ಅವಶ್ಯವಿದ್ದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಹಾಗೂ ಮತ ಎಣಿಕೆಯ ಸಲುವಾಗಿ  ಫೆಬ್ರವರಿ  20 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಮತ ಎಣಿಕೆ ನಡೆಯುವ ಕೇಂದ್ರಗಳ 3ಕಿ.ಮೀ. ವ್ಯಾಪ್ತಿ ಪ್ರದೇಶಗಳನ್ನು ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಈ ದಿನಗಳಲ್ಲಿ ಬಂಟ್ವಾಳ ತಾಲೂಕಿನ ,ಪುದು ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲುಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೊಟೇಲ್ ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಡುವುದನ್ನು ಕೂಡಾ ನಿಷೇಧಿಸಲು ಆದೇಶಿಸಿದ್ದಾರೆ.

Spread the love