ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಮುಖ್ಯ : ವೀಣಾ ಎಸ್. ಶೆಟ್ಟಿ

Spread the love

ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಮುಖ್ಯ : ವೀಣಾ ಎಸ್. ಶೆಟ್ಟಿ

  • ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ : ಅಖಿಲ ಭಾರತೀಯ ಸಂಘಟನಾತ್ಮಕ ಪ್ರವಾಸದ ವಿಶೇಷ ಕಾರ್ಯಕಾರಿಣಿ

ಉಡುಪಿ: ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ನೂರಾರು ಯೋಜನೆಗಳ ಮೂಲಕ ಜನಪರ ಆಡಳಿತದ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ನಮ್ಮ ಸುಯೋಗ. ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಸದೃಢ ಪಕ್ಷ ಸಂಘಟನೆಯ ಜೊತೆಗೆ ಲೋಕಸಭೆ ಸಹಿತ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಎಲ್ಲರೂ ಬದ್ಧತೆಯಿಂದ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಬಹಳ ಮುಖ್ಯವಾಗಿರುತ್ತದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹೇಳಿದರು.

ಅವರು ಬಿಜೆಪಿ ಕೇರಳ ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ನ್ಯಾಯವಾದಿ ರೂಪಾ ಬಾಬು ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ಕೇರಳ ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ನ್ಯಾಯವಾದಿ ರೂಪಾ ಬಾಬು ಮಾತನಾಡಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಹಾಗೂ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಅವರ ನೇತೃತ್ವದಲ್ಲಿ ದೇಶದ 25 ಬಿಜೆಪಿ ಮಹಿಳಾ ಮೋರ್ಚಾ ನಾಯಕಿಯರು ಫೆ.12 ಮತ್ತು 13ರಂದು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಘಟನಾ ಪ್ರವಾಸವನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಈ 2 ದಿನಗಳ ಅವಧಿಯಲ್ಲಿ ಹಮ್ಮಿಕೊಂಡಿರುವ 18 ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ. ಉಡುಪಿ ಜಿಲ್ಲೆ ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದ್ದು, ಜಿಲ್ಲಾ ಮಹಿಳಾ ಮೋರ್ಚಾ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಾದರಿ ಶ್ಲಾಘನೀಯ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರೂಪ ಬಾಬು ಅವರನ್ನು ಶಾಲು ಹೊದೆಸಿ ಫಲ ಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳಾದ ಮಾಲಿನಿ ಶೆಟ್ಟಿ, ವಿನಯ, ಸುಮಾ ಶೆಟ್ಟಿ, ದೀಪ, ಶಾಂತಿ, ವಸಂತಿ ಸತೀಶ್, ಸರೋಜ ಶೆಟ್ಟಿಗಾರ್, ಸುಜಾಲ ಸತೀಶ್, ಸುಧಾ ಪೈ, ಸುರೇಖಾ, ನೇತ್ರಾವತಿ, ಶ್ವೇತಾ, ಸೌರಭಿ ಪೈ, ರಜನಿ ಹೆಬ್ಬಾರ್, ನೀರಜಾ ಶೆಟ್ಟಿ, ಮಾಯಾ ಕಾಮತ್, ಅನಿತಾ ಆರ್.ಕೆ., ಅಶ್ವಿನಿ ಶೆಟ್ಟಿ ಪೂರ್ಣಿಮಾ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.


Spread the love