Home Mangalorean News Kannada News ಪದವಿನಂಗಡಿ ಪರಿಸರದಲ್ಲಿ ಅಕ್ರಮ ಮಟ್ಕಾ ದಂಧೆ : ಇಬ್ಬರ ಸೆರೆ

ಪದವಿನಂಗಡಿ ಪರಿಸರದಲ್ಲಿ ಅಕ್ರಮ ಮಟ್ಕಾ ದಂಧೆ : ಇಬ್ಬರ ಸೆರೆ

Spread the love

ಪದವಿನಂಗಡಿ ಪರಿಸರದಲ್ಲಿ ಅಕ್ರಮ ಮಟ್ಕಾ ದಂಧೆ : ಇಬ್ಬರ ಸೆರೆ

ಮಂಗಳೂರು: ನಗರದ ಪದವಿನಂಗಡಿ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಮತ್ತು ಕಾವೂರು ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಕಾವೂರು ನಿವಾಸಿ ಕೋಟಿ ಮೈಂದ ಪೂಜಾರಿ (55) ಮತ್ತು ಕುಳಾಯಿ ನಿವಾಸಿ ಪ್ರಶಾಂತ (35) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಪದವಿನಂಗಡಿ ಕೊರಗಜ್ಜ ಕಟ್ಟೆಯ ಯಶಸ್ವಿ ವೆಜ್ & ಫ್ರೂಟ್ ಎಂಬ ಅಂಗಡಿಯ ಬಳಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಮತ್ತು ಕಾವೂರು ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತನಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಇವರಿಂದ ಮಟ್ಕಾ ಆಟಕ್ಕೆ ಬಳಸಿದ ರೂ. 17,450/-ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 32450/- ಆಗಿರುತ್ತದೆ. ಈ ಮಟ್ಕಾ ದಂಧೆಯನ್ನು ಕಾವೂರಿನಲ್ಲಿರುವ ಸುಪ್ರೀಮ್ ಮೋಟಾರ್ ಡ್ರೈವಿಂಗ್ ಸ್ಕೂಲಿನ ಪ್ರಕಾಶ್ ಎಂಬಾತನು ನಡೆಸುತ್ತಿದ್ದು, ಆತನು ತಲೆಮರೆಸಿಕೊಂಡಿರುತ್ತಾನೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಟಿ. ಆರ್ ಸುರೇಶ್ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಪೊಲೀಸ್ ಉಪ ಆಯುಕ್ತರು( ಕಾ ಮತ್ತು ಸು) ರವರಾದ ಹನುಮಂತರಾಯ, ಐ.ಪಿ.ಎಸ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯರವರಾದ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಕಾವೂರು ಠಾಣಾ ಇನ್ಸ್ ಪೆಕ್ಟರ್ ಕೆ. ಆರ್ ನಾಯಕ್ ಸಿಸಿಬಿ ಘಟಕದ ಮತ್ತು ಕಾವೂರು ಠಾಣಾ ಸಿಬ್ಬಂದಿಗಳು ಭಾಗವಹಿಸಿದ್ದರು.


Spread the love

Exit mobile version