ಪರಿವರ್ತನಾ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

Spread the love

ಪರಿವರ್ತನಾ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಗಳೂರು: ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆಯ ರಾಷ್ಟ್ರದಲ್ಲಿಯೇ ಎರಡನೇಯದಾಗಿದೆ ಎಂದು ಕಾರ್ಯಕ್ರಮದ ಸಹಪ್ರಾಯೋಜಕರಾದ  ಫ್ಯಾಷನ್ ಎಬಿಸಿಡಿಯ ಚರಣ್ ಸುವರ್ಣ ಹೇಳಿದರು.

ಅವರು ಬುಧವಾರ ನಗರದ ಪ್ರೆಸ್ ಕ್ಲಬ್ಬಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಇಂತಹ ಸ್ಪರ್ಧೆಯು ರಾಜ್ಯದಲ್ಲಿ ಪ್ರಥಮವಾಗಿದ್ದು ಇಂತಹ ಒಂದು ಹೊಸ ಪ್ರಯೋಗಕ್ಕೆ ಪರಿವರ್ತನಾ ಚಾರೀಟೇಬಲ್ ಟ್ರಸ್ಟ್ ಮುಂದೆ ಬಂದಿದೆ. ಮಂಗಳಮುಖಯರು ಅಥವ ಲೈಂಗಿಕ ಅಲ್ಪಸಂಖ್ಯಾತರು ನಮ್ಮಂತೆಯೇ ಮನುಷ್ಯರು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ನಿಜಕ್ಕೂ ಶ್ಲಾಘನೀಯವಾಗಿದೆ. ಪರಿವರ್ತನ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆಯಲ್ಲಿ ಒಟ್ಟು 12 ಮಂದಿ ಮಂಗಳಮುಖಿಯರನ್ನು ಆಯ್ಕೆ ಮಾಡಿದ್ದು, ಅವರಿಗೆ ರ್ಯಾಂಪ್ ವಾಕ್ ಇತ್ಯಾದಿ ವಿಷಯಗಳ ಬಗ್ಗೆ ಅವರಿಗೆ ತರಬೇತಿ ನೀಡಿ ಅಕ್ಟೋಬರ್ 14 ರಂದು ಭಾನುವಾರ ಸಂಜೆಯ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ರಾಜ್ಯ ಮಟ್ಟದ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆಯನ್ನು ರಾಜ್ಯದ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದು, ವಿವಿಧ ಕ್ಯಾಬಿನೆಟ್ ಸಚಿವರು ಹಾಗೂ ಇತರ ಗಣ್ಯರು ಇದಕ್ಕೆ ಸಾಕ್ಷಿಯಾಗಲಿದ್ದಾರೆ.

ಅಂತಿಮ ಸುತ್ತಿನ ಸ್ಪರ್ಧಾಳುಗಳು ಮೂರು ವಿಭಾಗದಲ್ಲಿ ರ್ಯಾಂಪ್ ಮೇಲೆ ಹೆಜ್ಜೆ ಹಾಕಲಿದ್ದು, 12 ಮಂದಿಯಲ್ಲಿ ಅಂತಿಮವಾಗಿ 3 ಮಂದಿಯನ್ನು ವಿಜೇತರ ಸುತ್ತಿಗೆ ಆಯ್ಕೆ ಮಾಡಲಾಗುವುದು. ಪ್ರಥಮ ಬಹುಮಾನ ಪಡೆದ ಸ್ಪರ್ಧಿಯು ಮುಂದೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಮಂಗಳಮುಖಿಯರಿಗೂ ಕೂಡ ವೇದಿಕೆ ಕಲ್ಪಿಸಿದಂತಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಸಿಂಗಾಪೂರದಲ್ಲಿ ನಡೆಯಲಿದ್ದು ಅಲ್ಲಿಗೆ ಅವರನ್ನು ಭಾಗವಹಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಪರಿವರ್ತನಾ ಚಾರೀಟೇಬಲ್ ಟ್ರಸ್ಟಿನ ಸಂಸ್ಥಾಪಕಿ ವಾಯ್ಲೆಟ್ ಪಿರೇರಾ ಹಾಗೂ ಸಿಲ್ವಿಯಾ ಕ್ಯಾಸ್ತಲಿನೊ ಉಪಸ್ಥಿತರಿದ್ದರು.


Spread the love