ಪಶ್ಚಿಮ ವಲಯ ಐಜಿಪಿಯಾಗಿ ನಿಂಬಾಳ್ಕರ್ ಅಧಿಕಾರ ಸ್ವೀಕಾರ
ಮಂಗಳೂರು: ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಐಜಿಪಿ ಹರಿಶೇಖರನ್ ಅವರು ನೂತನ ಐಜಿಪಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜದ ಸ್ವಾಸ್ಥ್ಯ ಕದಡುವ ಚಟುವಟಿಕೆಗೆ ಕಾನೂನು ರೀತಿಯಲ್ಲಿ ತಕ್ಕ ಉತ್ತರ ನೀಡುವ ವ್ಯವಸ್ಥೆಯಿದ್ದು, ಸಾಮಾನ್ಯ ಜನರಿಗೆ ಸೇವೆ ನೀಡಲು ಇಲಾಖೆಯಿಂದ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಾಗುವುದು. ಸಾಮಾನ್ಯ ಜನರ ನೆಮ್ಮದಿಯ ಜೀವನಕ್ಕೆ ಅಡ್ಡ ಬರುವವರಿಗೆ ತಕ್ಕ ಉತ್ತರ ನೀಡಲಾಗುವುದು ಹಾಗೂ ಅಕ್ರಮ ಹಾಗೂ ಅಪರಾಧ ಚಟುವಟಿಕೆ ಯಾವುದೇ ಇರಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿರ್ಗಮನ ಐಜಿಪಿ ಹರಿಶೇಖರನ್ ಅವರು ಬೆಂಗಳೂರು ಆಡಳಿತ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.