ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ

Spread the love

ಮಂಗಳೂರು:  ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ

ಮಂಗಳೂರು: ರೈತರಿಗೆ ನಿಗಧಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿರುತ್ತದೆ. ಆದ್ದರಿಂದ, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿರುವ ಭೂಮಾಲೀಕರು, ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ, ಸದ್ರಿಯವರು ಅವರಿಂದ ಮಾಹಿತಿಯನ್ನು ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡುವಂತೆ ತಿಳಿಸಲಾಗಿದೆ. ಈ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು, ಸೈಬರ್ ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.

ಆದ್ದರಿಂದ, ಈ ವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ, ಆಧಾರ್ ಜೋಡಣೆ ಮಾಡದೇ ಇರುವ ಭೂ ಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments