ಪೂವಮ್ಮ ಅವರಿಗೆ ಒಂದು ಕೋಟಿ ಪ್ರೋತ್ಸಾಹ ಧನ, ನಿವೇಶನ ನೀಡಲು ಶಾಸಕ ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ 18ನೇ ಏಷ್ಯನ್ ಗೇಮ್ಸ್ನ ರಿಲೇಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ಅವರು ಗುರುವಾರ ತವರಿಗೆ ಆಗಮಿಸಿದ ಪೂವಮ್ಮ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದ.ಕ. ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಕ್ರೀಡಾ ಇಲಾಖೆ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಾಸಕ ವೇದವ್ಯಾಸ್ ಕಾಮತ್ ಪೂವಮ್ಮರನ್ನು ಸನ್ಮಾನಿಸಿದರು.
ಬಳಿಕ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪೂವಮ್ಮ ಅವರು ನಮ್ಮ ದೇಶ, ರಾಜ್ಯ, ಮಂಗಳೂರಿಗೆ ಕೀರ್ತಿ ತಂದ ಕ್ರೀಡಾಪಟು. ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ವಿವಿಧ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ ನಡೆದ ಏಶಿಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದಾರೆ. ಅವರಿಗೆ ಮಂಗಳೂರು ನಗರದಲ್ಲಿ ಸರಕಾರಿ ನಿವೇಶನ ಕೊಡುವ ಮೂಲಕ ಸರಕಾರ ಅವರನ್ನು ಪ್ರೋತ್ಸಾಹಿಸಬೇಕು. ಪೂವಮ್ಮ ಕುಟುಂಬದವರು ನಾಲ್ಕು ವರ್ಷಗಳ ಹಿಂದೆನೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದನ್ನು ಇನ್ನು ತಡ ಮಾಡದೇ ಆದಷ್ಟು ಬೇಗ ಪೂವಮ್ಮ ಅವರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಏಶಿಯನ್ ಕ್ರೀಡಾಕೂಟದಲ್ಲಿ ರಿಲೆಯಲ್ಲಿ ಬಂಗಾರದ ಪದಕ ಗಳಿಸಿ ರಾಜ್ಯ, ರಾಷ್ಟ್ರ, ಮಂಗಳೂರು ನಗರಕ್ಕೆ ಕೀರ್ತಿ ತಂದಿರುವ ಪೂವಮ್ಮ ಅವರಿಗೆ ಮಂಗಳೂರು ನಗರದಲ್ಲಿ ಸರಕಾರಿ ನಿವೇಶನ ಮತ್ತು ಒಂದು ಕೋಟಿ ರೂಪಾಯಿಯನ್ನು ಪ್ರೋತ್ಸಾಹಧನವಾಗಿ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಪೂವಮ್ಮ ಅವರು ಮಾಡಿರುವ ಸಾಧನೆಯ ಹಿಂದೆ ಅಪಾರ ಶ್ರಮ ಅಡಗಿದೆ. ಅದನ್ನು ಪರಿಗಣಿಸಿ ಪೂವಮ್ಮ ಅವರಿಗೆ ಕನಿಷ್ಟ ಒಂದು ಕೋಟಿ ರೂಪಾಯಿಯನ್ನು ರಾಜ್ಯ ಸರಕಾರ ನೀಡಬೇಕು. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಹೆಸರನ್ನು ಉನ್ನತ ಸ್ಥಾನಕ್ಕೆ ಏರಿಸಲು ಪೂವಮ್ಮ ಅವರಿಗೆ ಇನ್ನಷ್ಟು ಸ್ಫೂರ್ತಿ ಸಿಕ್ಕಿದ್ದಂತೆ ಆಗುತ್ತದೆ ರೆ. ತಾವು ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ವೈಯಕ್ತಿಕವಾಗಿ ವಿನಂತಿಸುವುದಾಗಿ ಅವರು ತಿಳಿಸಿದರು .
ಪೂವಮ್ಮ ಕುಟುಂಬದವರು ನಾಲ್ಕು ವರ್ಷಗಳ ಹಿಂದೆನೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದನ್ನು ಇನ್ನು ತಡ ಮಾಡದೇ ಆದಷ್ಟು ಬೇಗ ಪೂವಮ್ಮ ಅವರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕರು ಹೇಳಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಸಂಜಯ ಪ್ರಭು, ಪ್ರಭಾ ಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ವಸಂತ ಜೆ ಪೂಜಾರಿ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರೂಪಾ ಡಿ ಬಂಗೇರು, ಭರತ್, ಕಿರಣ್ ರೈ ಉಪಸ್ಥಿತರಿದ್ದರು