ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Spread the love

ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19 ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ಡಿಸೇಲ್, ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಹೇಳಿದರು.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ ಅಂತಾರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೆ ಎರಿದಾಗ ದೇಶದಲ್ಲಿ ತೈಲ ಬೆಲೆ ಹೆಚ್ಚಿಸಿದಾಗ ಬೀದಿಗಿಳಿದು ಹೋರಾಟ ಮಾಡಿವವರೇ ಈಗ ಅಧಿಕಾರದಲ್ಲಿದ್ದಾರೆ. ಪ್ರಸ್ತುತ ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದು, 30 ರಿಂದ 35 ರೂಪಾಯಿಗೆ ಡಿಸೇಲ್ ನೀಡಬೇಕಿತ್ತು. ಬದಲಾಗಿ ತೈಲ ಬೆಲೆ ಏರಿಸುವ ಮೂಲಕ ಕೇಂದ್ರದ ಮೋದಿ ಸರ್ಕಾರ ಜನಸಾಮಾನ್ಯರ ಮೇಲೆ ದಾಳಿ ನಡೆಸುತ್ತಿದೆ. ಕೋವಿಡ್-19 ನಿರ್ವಹಣೆಯಲ್ಲೂ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು ಆರ್ಥಿಕವಾಗಿ ಜನರು ಹೈರಾಣಾಗಿದ್ದಾರೆ ಎಂದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಯಾಡಿ ಶಿವರಾಮ್ ಶೆಟ್ಟಿ, ಶಂಕರ ಕುಂದರ್, ವಿಕಾಸ್ ಹೆಗ್ಡೆ, ಅಶೋಕ್ ಪೂಜಾರಿ, ಇಚ್ಚಿತಾರ್ಥ್ ಶೆಟ್ಟಿ, ಶ್ಯಾಮಲ ಭಂಡಾರಿ, ಕುಮಾರ್ ಖಾರ್ವಿ, ಅಣ್ಣಯ್ಯ ಪುತ್ರನ್, ಚಂದ್ರ ಅಮೀನ್, ದೇವಕಿ ಸಣ್ಣಯ್ಯ, ಅಶೋಕ್ ಪೂಜಾರಿ ಬೀಜಾಡಿ ಕೆ. ಶಿವಕುಮಾರ್, ಶಶಿರಾಜ್ , ಶ್ರೀನಿವಾಸ ಶೆಟ್ಟಿ, ವಿಠಲ್ ಕಾಂಚನ್, ಚಂದ್ರಶೇಖರ್ ಶೆಟ್ಟಿ, , ಬಿ.ವೈ. ರಾಘವೇಂದ್ರ, ಸ್ಟೀವನ್ ಡಿ ಕೋಸ್ಟಾ, ಶ್ರೀಧರ ಶೇರಿಗಾರ್, ಚಂದ್ರಶೇಖರ್ ಖಾರ್ವಿ, ಮೋಹಮದ್ ಹುಸೇನ್, ರಘುರಾಮ ನಾಯ್ಕ್, ರೋಶನ್ ಶೆಟ್ಟಿ, ಶಿವರಾಮ್ ಪುತ್ರನ್, ಧನರಾಜ್, ಶಶಿರ, ಗಂಗಾಧರ ಶೆಟ್ಟಿ ಉಪಸ್ಥಿತರಿದ್ದರು. ನಂತರ ಸಹಾಯಕ ಕಮಿಷನರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಗಣೇಶ ಶೇರಿಗಾರ್ ಸ್ವಾಗತಿಸಿ, ಚಂದ್ರಶೇಖರ ಖಾರ್ವಿ ವಂದಿಸಿದರು. ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.


Spread the love