ಪೋಲಿಸ್ ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿದ್ರೆ ಸಹಿಸೊಲ್ಲ; ಸಂಘಟನೆಗಳಿಗೆ ಅಣ್ಣಾಮಲೈ ಖಡಕ್ ವಾರ್ನಿಂಗ್
ಚಿಕ್ಕಮಗಳೂರು : ಖಾಕಿ ಬಟ್ಟೆ ಹಾಕಿದ ಮೇಲೆ ನಮಗೆ ಎಲ್ಲರೂ ಒಂದೇ. ಎಲ್ಲಾ ಧರ್ಮವೂ ಒಂದೇ ನನ್ನ ಸಬ್ ಇನ್ಸ್ ಪೆಕ್ಟರ್ ನನ್ನ ಅಣತಿಯಂತೆ ಕೆಲಸ ಮಾಡಿದ್ದಾರೆ. ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿರೋರ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರು ಚಿಕ್ಕಮಗಳೂರಿನ ಮೂಡಿಗೆರೆ ಧನ್ಯಶ್ರೀ ಆತ್ಮಹತ್ಯೆ ರಾಜಕೀಯ ಮಾಡುತ್ತಿರುವ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಧನ್ಯಶ್ರೀ ಆತ್ಮಹತ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚಿಕ್ಕಮಗಳೂರು ಶಾಂತಿಯುತವಾಗಿರುವ ಜಿಲ್ಲೆ ಸುಮ್ಮನೆ ಏನೇನೋ ಮಾತಾಡಿ ಶಾಂತಿ ಭಂಗ ಮಾಡಬೇಡಿ. ಲೀಡರ್ ಅಂತಾ ಹೇಳ್ಕೊಂಡು ನಾನು ಆ ಸಂಘಟನೆಯರು, ಈ ಸಂಘಟನೆಯವರು ಅಂತಾ ಏನೇನೋ ಮಾತಾಡ್ಬೇಡಿ. ಏನೇನೋ ಕ್ರಿಯೇಟ್ ಮಾಡಬೇಡಿ.ನೀವು ಹಾವಿನ ಜೊತೆ ಆಟವಾಡ್ತಾ ಇದ್ದೀರಿ. ನೀವು ತಲೆ ಹಿಡಿದ್ರೂ ಸರಿ, ಬಾಲ ಹಿಡಿದ್ರೂ ಹಾವು ಕಚ್ಚೇ ಕಚ್ಚುತ್ತೆ. ನಿಮಗೆಲ್ಲಾ ಡೈರೆಕ್ಟ್ ವಾರ್ನಿಂಗ್ ಕೊಡ್ತಾ ಇದ್ದೇನೆ. ನಾನು ಡ್ರಾಮಾ ಮಾಡೋದಕ್ಕೆ ಚಿಕ್ಕಮಗಳೂರಿಗೆ ಬಂದಿಲ್ಲ. ಎಸ್ ಎಸ್ ಎಲ್ ಸಿ ಪಾಸ್ ಮಾಡ್ಕೊಂಡು ನಾನು ಬಂದಿಲ್ಲ. ಐಪಿಎಸ್ ಮಾಡ್ಕೊಂಡು ಪೊಲೀಸ್ ಇಲಾಖೆಗೆ ಬಂದಿದ್ದೇನೆ.ಇದು ಕಡೇ ಅವಕಾಶ ಇನ್ನೋಮ್ಮೆ ಪೋಲಿಸ್ ಇಲಾಖೆ ಬಗ್ಗೆ ಕೇವಲವಾಗಿ ಮಾತಾಡಿದ್ರೆ ಸುಮ್ಮನೆ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾವಿಗೂ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ ಹೊಟ್ಟೆ ಇದ್ದದ್ದು ಮರಣೋತ್ತರ ಪರೀಕ್ಷೆಯಿಂದ ಧೃಡಪಟ್ಟಿದೆ ಎಂದು ಹೇಳಿದ್ದಾರೆ.
ಧನ್ಯಶ್ರೀ ಮನೆಗೆ ಐವರು ಸಂಘಟನಾಕಾರರು ಎರಡು ಬಾರಿ ಹೋಗಿ ಬಂದಿರೋ ದಾಖಲೆ ಇದೆ. ಅವರ ಮನೆಗೆ ಹೋಗಿ ಹೆತ್ತವರ ಎದುರೇ ಸೊಂಟದ ಕೆಳಗಿನ ಭಾಷೆಯಲ್ಲಿ ಬಾಯಿಗೆ ಬಂದಂತೆ ಬಯ್ದಿರೋದು ಗೊತ್ತಾಗಿದೆ. ಎರಡು, ಮೂರು, ನಾಲ್ಕನೇ ತಾರೀಖು ಬೋಲ್ಡ್ ಆಗಿದ್ದ ಧನ್ಯಶ್ರೀ ಐದನೇ ತಾರೀಖು, ಐವರು ಎರಡು ಬಾರಿ ಮನೆಗೆ ಬಂದುಹೋದ ಮೇಲೆ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.
ಈ ಬಗ್ಗೆ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಧನ್ಯಶ್ರೀ ತಂದೆಯಿಂದ ತಪ್ಪಾಗಿ ದೂರು ನೀಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾಕಂದರೆ ಧನ್ಯಶ್ರೀ ತಂದೆ ನೀಡಿದ್ದ ದೂರಿಗೂ, ಸಿಕ್ಕ ದಾಖಲೆಗಳು, ಡೆತ್ನೋಟ್ಗೂ 1 ಪರ್ಸೆಂಟ್ ಕೂಡ ಮ್ಯಾಚ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಲದಕ್ಕೆ ಸಂತೋಷ್ ಎಂಬ ಹೆಸರಿನಲ್ಲಿ ಧನ್ಯಶ್ರೀ ಜೊತೆ ವಾಟ್ಸಪ್ನಲ್ಲಿ ಚಾಟ್ ಮಾಡಿರೋ ವ್ಯಕ್ತಿ ಸಂತೋಷ್ ಅಲ್ಲ. ಆತ ಯಾರೆಂಬುದು ಗೊತ್ತಾಗಿದೆ. ಸದ್ಯದಲ್ಲೇ ಅವನನ್ನೂ ಅರೆಸ್ಟ್ ಮಾಡ್ತೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿರೋರ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದಲ್ಲಿ ಯಾರೇ ಇರಲಿ, ಎಷ್ಟೆ ದೊಡ್ಡ ವ್ಯಕ್ತಿಗಳೇ ಬರಲಿ, ಎಷ್ಟೆ ಒತ್ತಡ ಬಂದರು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.