ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಉಡುಪಿಗೆ ಆಗಮಿಸಿದ ಎನ್.ಡಿ.ಆರ್.ಎಫ್ ಪಡೆ
ಉಡುಪಿ: ಉಡುಪಿ ನೆರೆಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ನಾಗರಿಕರನ್ನು ರಕ್ಷಣೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣಾ ಪಡೆ (NDRF) ಉಡುಪಿಗೆ ಆಗಮಿಸಿದೆ.
ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹೆಚ್ಚಿನ ಪ್ರದೇಶಗಳು ಮುಳುಗಡೆಯಾಗಿದ್ದು ಜನರು ಪ್ರವಾಹದಲ್ಲಿ ಸಿಲುಕಿದ್ದು ಅವರ ರಕ್ಷಣೆಗಾಗಿ ಎನ್ ಡಿ ಆರ್ ಎಫ್ ಪಡೆ ಆಗಮಿಸಿದ್ದು ಉಡುಪಿಯ ದೊಡ್ಡಣಗುಡ್ಡೆ, ಪೆರಂಪಳ್ಳಿ ಪ್ರದೇಶದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಹತ್ತನೇ ಬಟಾಲಿಯನ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಉಡುಪಿಗೆ ಆಗಮಿಸಿದ್ದು ಟೀಮ್ ಕಮಾಂಡರ್ ಗೋಪಾಲ್ ಮೀನಾ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ
ಮೋಟಾರ್ ಬೋಟ್ ಬಳಸಿ ಪೆರಂಪಳ್ಳಿಯ ಪಾಸ್ಕ್ ಕುದ್ರು ಭಾಗಗಳಲ್ಲಿ ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.