ಪ್ಲೆಕ್ಸ್ ಬ್ಯಾನರ್ ತೆರವುಗೊಳಿಸಲು ಮಹಾನಗರಪಾಲಿಕೆ ಸೂಚನೆ

Spread the love

ಪ್ಲೆಕ್ಸ್ ಬ್ಯಾನರ್ ತೆರವುಗೊಳಿಸಲು ಮಹಾನಗರಪಾಲಿಕೆ ಸೂಚನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆ ಬದಿ, ಸರ್ಕಲ್ ಮತ್ತು ಸಾರ್ವಜನಿಕರು ಓಡಾಡುವ ಫುಟ್‍ಪಾತ್‍ಗಳನ್ನು ಅತಿಕ್ರಮಿಸಿಕೊಂಡು ಅನಧಿಕೃತವಾಗಿ ಅಳವಡಿಸಲಾಗುತ್ತಿರುವ ಪ್ಲೆಕ್ಸ್, ಬ್ಯಾನರ್‍ಗಳನ್ನು ಪಾಲಿಕೆ ವತಿಯಿಂದ ತೆರವುಗೊಳಿಸಲಾಗುತ್ತಿದೆ. ಸಂಚಾರ ಸುರಕ್ಷತೆ ಸಾರ್ವಜನಿಕ ಹಿತದೃಷ್ಟಿ ಹಾಗೂ ನಗರದ ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಆಳವಡಿಸಿರುವ ಪ್ಲೆಕ್ಸ್ ಬ್ಯಾನರ್‍ಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಪಾಲಿಕೆಯು ತೆರವು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ಅನಧಿಕೃತ ಪ್ಲೆಕ್ಸ್, ಬ್ಯಾನರ್ ಅಳವಡಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments