ಫರಂಗಿಪೇಟೆಯಲ್ಲಿ ಸಾಮರಸ್ಯ ನಡಿಗೆಗೆ ಚಾಲನೆ
ಮಂಗಳೂರು: ಫರಂಗಿಪೇಟೆಯಲ್ಲಿ ಸಾಮರಸ್ಯ ನಡಿಗೆಗೆ ಸಚಿವ ಬಿ.ರಮಾನಾಥ ರೈ, ಬಹುಭಾಷಾ ನಟ ಪ್ರಕಾಶ್ ರೈ, ಸಿಪಿಎಂ ರಾಜ್ಯ ಮಂಡಳಿ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ, ಸಿಪಿಐ ಮುಖಂಡ ಡಾ.ಸಿದ್ದನಗೌಡ ಪಾಟೀಲ, ಜೆಡಿಎಸ್ ಮುಖಂಡ ಕೆ.ಅಮರನಾಥ ಶೆಟ್ಟಿ ಮತ್ತಿತರರು ಪಾರಿವಾಳ ಹಾಗೂ ಬಲೂನುಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿದರು.
ಶಾಸಕರಾದ ವಸಂತ ಬಂಗೇರ, ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸಿಪಿಎಂ ಜಿಲ್ಲಾ ಮಂಡಳಿ ಕಾರ್ಯದರ್ಶಿ ಕೆ.ವಸಂತ ಆಚಾರಿ, ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ವಿ.ಕೆ.ಕುಕ್ಯಾನ್, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿಕಿರಣ್ ಪುಣಚ್ಚ, ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಸೇರಿದಂತೆ ಹಲವರು ಭಾಗಿಯಾದರು
ಕಾಂಗ್ರೆಸ್, ಸಿಪಿಎಂ, ಸಿಪಿಐ, ರೈತ ಸಂಘ, ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದು, ಪಾದಯಾತ್ರೆ ಸಾಗುವ 24 ಕಿ.ಮೀ. ಮಾರ್ಗದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.