ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆ ಪ್ರಕರಣ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ಫರಂಗಿಪೇಟೆಯ ಅಮೆಮಾರ್ ನಿವಾಸಿ ಯುವಕ 19 ವರ್ಷ ಪ್ರಾಯದ ದಿಗಂತ್ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದಾನೆ. ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದು ವಿಶ್ವ ಹಿಂದೂ ಪರಿಷತ್ ನಾಯಕರು ದಿಗಂತ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದ್ದಾರೆ.
ಪೊಲೀಸರ ವಿರುದ್ಧ ಸಿಡಿದೆದ್ದಿದ್ದು ಶನಿವಾರ ಮುಂಜಾನೆಯಿಂದಲೇ ಫರಂಗಿಪೇಟೆಯಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಿದ್ದಾರೆ. ದಿಗಂತ್ ನಾಪತ್ತೆಯ ಹಿಂದೆ ಸ್ಥಳೀಯ ಗಾಂಜ ದಂದೆಯ ಜನರು ಇದ್ದು, ಅವರಿಂದ ದಿಗಂತ್ ಗೆ ಏನೋ ಆಗಿದೆ ಅಂತ ಆರೋಪಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಇದೀಗ ಫರಂಗಿ ಪೇಟೆ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.ಪ್ರತಿಭಟನೆಯಲ್ಲಿ ಸಂಸದ ಬ್ರಿಜೇಶ್ ಚೌಟ,ಶಾಸಕ ವೈ ಭರತ್ ಶೆಟ್ಟಿ ಹಾಗೂ ಇನ್ನಿತರ ಹಿಂದು ಸಂಘಟನೆಯ ಮುಖಂಡು ಭಾಗಿಯಾಗಿದ್ದಾರೆ.