ಫೆಂಗಲ್ ಚಂಡಮಾರುತದಿಂದ ವ್ಯಾಪಕ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಡಿ 3) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ಮಂಗಳೂರು: ಫೆಂಗಲ್ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ