ಫೆಂಗಲ್ ಚಂಡಮಾರುತದ ಹಿನ್ನೆಲೆ: ‘ಬಹುಸಂಸ್ಕೃತಿ ಉತ್ಸವ’ ಮುಂದೂಡಿಕೆ
ಮಂಗಳೂರು: ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಹಾಗೂ ಕರ್ನಾಟಕ ಯಕ್ಷಗಾನ ಅಕಾಡಮಿಗಳು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಡಿಸೆಂಬರ್ 3 ಮತ್ತು 4ರಂದು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಬಹುಸಂಸ್ಕೃತಿ ಉತ್ಸವ’ ಕಾರ್ಯಕ್ರಮವನ್ನು ಫೆಂಗಲ್ ಚಂಡಮಾರುತದ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.