ಫೆಬ್ರವರಿ 15 : ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ
ಮೂಡಬಿದ್ರೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ತುಳು ಸಂಸ್ಕøತಿ ಅಧ್ಯಯನ ಕೇಂದ್ರ ಹಾಗೂ ಕನ್ನಡ ವಿಭಾಗದ ಸಹಕಾರದೊಂದಿ “ತುಳುವರ ಆರಾಧನಾ ಸಂಸ್ಕøತಿ: ನೆಲೆ -ಬೆಲೆ” ಎಂಬ ವಿಷಯದ ಬಗ್ಗೆ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ದಿನಾಂಕ 15.02.2019 ರಂದು ಸದ್ರಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪೂರ್ವಾಹ್ನ 10.00 ಗಂಟೆಗೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಎ.ಸಿ.ಭಂಡಾರಿ ರವರು ಉದ್ಘಾಟಿಸಲಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪೂರ್ವಾಹ್ನ 10.30 ರಿಂದ ಜರಗಲಿರುವ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರುಣ್ ಕುಮಾರ್ ಎಸ್.ಆರ್, ಜಾನಪದ ವಿದ್ವಾಂಸ ಶ್ರೀ ಕೆ.ಎಲ್.ಕುಂಡಂತಾಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಎ. ಗುಣಪಾಲ ಕಡಂಬ ರವರು “ತುಳುನಾಡಿನ ಆಲಡೆಗಳು“ ದೈವಾರಾಧನೆ –ಕಲಾಮೌಲ್ಯಗಳು” ಮತ್ತು “ ತುಳುವರ ಕೃಷಿ ಸಂಸ್ಕøತಿ” ಗಳ ಬಗ್ಗೆ ವಿಷಯ ಮಂಡಿಸಲಿದ್ದಾರೆ.