ಫೆ.15: ಮೀನು ಮಾರಾಟ ಫೆಡರೇಶನ್, ಮಹಾಲಕ್ಷೀ ಬ್ಯಾಂಕ್ ವತಿಯಿಂದ 950 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಫೆಬ್ರವರಿ 15 ಶನಿವಾರ ಮಧ್ಯಾಹ್ನ 3 ಗಂಟೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಸಮಾರಂಭವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಮಹಾ ನಗರಪಾಲಿಕೆ ಮೇಯರ್ ಶ್ರೀ ಮನೋಜ್ ಕುಮಾರ್, ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಕೋಡಿಕಲ್, ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷರಾದ ಶ್ರೀ ಮೋಹನ್ ಬೆಂಗ್ರೆ, ದ.ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಭರತ್ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಗೌತಮ್ ಕೋಡಿಕಲ್,ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಲೋಕೇಶ್ ಸುವರ್ಣ, ಮಹಾನಗರ ಪಾಲಿಕೆ ಸದಸ್ಯೆ ನಯನ ಆರ್. ಕೋಟ್ಯಾನ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.